Sunday, August 15, 2021

ಸಿದ್ಧಗಂಗಾ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಧ್ವಜಾರೋಹಣ ಮಾಡಿದ SSLC ಟಾಪರ್ಸ್

ದಾವಣಗೆರೆ, ಆ.15

ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ನಗರದ ಸಿದ್ಧಗಂಗಾ ವಿದ್ಯಾಸಂಸ್ಥೆಯಲ್ಲಿ SSಐಅ ಯಲ್ಲಿ 625 ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಬಾಲಕಿಯರಾದ ಅನುಷಾ ಗ್ರೇಸ್ ಮತ್ತು ವಿಜೇತಾ ಮುತ್ತಗಿಯವರಿಂದ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. ಧ್ವಜಾರೋಹಣದ ನಂತರ ಮಾತನಾಡಿದ ಈ ಇಬ್ಬರೂ ಬಾಲಕಿಯರು ತಮಗೆ ದೊರೆತ ಈ ಸದಾವಕಾಶದಿಂದ ರೋಮಾಂಚಿತಗೊಂಡಿದ್ದೇವೆ ಎಂದು ಹೇಳುತ್ತಾ ತಮ್ಮ ಸಾಧನೆಗೆ ಪ್ರೇರಣೆ ನೀಡಿದ ಎಲ್ಲ ಶಿಕ್ಷಕರಿಗೆ ಮತ್ತು ಪ್ರೋತ್ಸಾಹ ನೀಡಿದ ಪಾಲಕರಿಗೆ ಧನ್ಯವಾದಗಳನ್ನು ತಿಳಿಸಿದರು. 

ಈ ಸಂದರ್ಭದಲ್ಲಿ 600 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಮಕ್ಕಳಿಗೆ ಪಾಲಕರೊಂದಿಗೆ ಸನ್ಮಾನ ಕಾರ್ಯಕ್ರಮವನ್ನು ಸಂಸ್ಥೆ ಏರ್ಪಡಿಸಿತ್ತು.

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸರಾದ ಶಿವಲಿಂಗಪ್ಪನವರು ತಮ್ಮ ವಿಶೇಷ ಉಪನ್ಯಾಸದಲ್ಲಿ ಸ್ವಾತಂತ್ರ್ಯ ಪೂರ್ವದ ಭಾರತ, ಸ್ವಾತಂತ್ರ್ಯಾನಂತರದ ಭಾರತದ ಸ್ಥೂಲ ಪರಿಚಯ ಮಾಡಿಕೊಡುತ್ತಾ ಮಕ್ಕಳು ಸಂಸ್ಕಾರವಂತರಾಗಿ ತಮ್ಮ ಭವಿಷ್ಯ ರೂಪಿಸಿಕೊಂಡು ದೇಶವನ್ನು ಮುನ್ನಡೆಸಬೇಕೆಂದು ಕರೆ ನೀಡಿದರು.

ಮುಖ್ಯ ಅತಿಥಿಯಾಗಿ ಪರಿಣಾಮಕಾರಿಯಾಗಿ ಭಾಷಣ ಮಾಡಿದ ಸಂಸ್ಥೆಯ ನಿರ್ದೇಶಕರಾದ ಡಾ|| ಜಯಂತ್ ರವರು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅನೇಕ ದೇಶಭಕ್ತರ ಉಕ್ತಿಗಳನ್ನು ಉಚ್ಛರಿಸುತ್ತಾ ಸಭಿಕರಲ್ಲಿ ದೇಶಭಕ್ತಿಯ ಸಂಚಲನ ಮೂಡಿಸಿದರು.

ಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್ ಡಿ’ಸೌಜ ರವರು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ SSಐಅ ಮಕ್ಕಳ ಐತಿಹಾಸಿಕ ದಾಖಲೆಯನ್ನು ಶ್ಲಾಘಿಸುತ್ತಾ ಎಲ್ಲರನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು.

ದೇಶಭಕ್ತಿ ಗೀತೆಗಳನ್ನು ತೇಜಸ್ವಿನಿ, ನಿರ್ಮಲ ಗುಬ್ಬಿ, ಸಿಂಚನ, ಕಾವ್ಯ ಮತ್ತು ರುದ್ರಾಕ್ಷಿಬಾಯಿ ಹಾಗೂ ಕನ್ನಡ ಉಪನ್ಯಾಸಕ ನಾಗರಾಜ್‍ರವರು ಪ್ರಸ್ತುತಿ ಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಸಿದ್ಧಗಂಗಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಉ.ಅ ನಿರಂಜನ್ ರವರು ಪ್ರತಿಭೆಯನ್ನು ಪ್ರೋತ್ಸಾಹಿಸುತ್ತಿರುವ ಆಡಳಿತ ಮಂಡಳಿ ಮತ್ತು ಕರೋನಾ ಸಮಯದಲ್ಲಿ ಮನೆ ಮನೆಗೆ ಪಾಠಗಳನ್ನು ಮಕ್ಕಳಿಗೆ ನಿರಂತರವಾಗಿ ತಲುಪಿಸುತ್ತಿರುವ ಶಿಕ್ಷಕ ಮತ್ತು ಉಪನ್ಯಾಸಕರನ್ನು ಅಭಿನಂದಿಸುತ್ತಾ ತಾಂತ್ರಿಕ ವರ್ಗವನ್ನು ಮುನ್ನಡೆಸುತ್ತಿರುವ ಸಂಸ್ಥೆಯ ಅಧ್ಯಕ್ಷ ಪ್ರಶಾಂತ್‍ರವರ ಕಾರ್ಯ ವೈಖರಿಯನ್ನು ಮುಕ್ತವಾಗಿ ಶ್ಲಾಘಿಸಿದರು. ಎಲೆಮರೆಯ ಕಾಯಿಯಂತೆ ತಮ್ಮ ಕಾಯಕವನ್ನು ಸದ್ದುಗದ್ದಲವಿಲ್ಲದೆ ನಿರ್ವಹಿಸುತ್ತಿರುವ ಸಂಸ್ಥೆಯ ಕಾರ್ಯದರ್ಶಿ ಹೇಮಂತ್‍ರವರನ್ನು ಅಭಿನಂದಿಸಿದರು.

ಸಾಮಾಜಿಕ ಅಂತರ ಕಾಯ್ದುಕೊಂಡು ಸಂಸ್ಥೆಯ ಶಾಲಾ ಕಾಲೇಜಿನ ಬೋಧಕವರ್ಗ ಮತ್ತು ಬೋಧಕೇತರ ಸಿಬ್ಬಂದಿ, ತಾಂತ್ರಿಕ ವರ್ಗ ಮತ್ತು ಕಛೇರಿ ಸಿಬ್ಬಂದಿಯವರು, ಹಲವಾರು ಪಾಲಕರು ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಕನ್ನಡ ಉಪಾನ್ಯಾಸಕರಾದ ಸದಾಶಿವ ಹೊಳ್ಳ ಅವರು ಅಚ್ಚುಕಟ್ಟಾಗಿ ನಿರ್ವಹಿಸಿದರು. 


No comments:

Post a Comment