ದಾವಣಗೆರೆ-JUNE 14
ಕನ್ನಡ ಪ್ರಭ ಮತ್ತು ಸುವರ್ಣ ಏಷ್ಯಾನೆಟ್ ಸಮೂಹ ಸಂಸ್ಥೆಗಳಿಂದ ಜೂನ್ 14 ರಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಏರ್ಪಡಿಸಿದ್ದ ಸುವರ್ಣ ಸಾಧಕಿ ಪ್ರಶಸ್ತಿಯನ್ನು ನಗರದ ಸಿದ್ಧಗಂಗಾ ಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್ ಡಿʼಸೌಜರವರಿಗೆ ಪ್ರದಾನ ಮಾಡಲಾಯಿತು. ಶಿಕ್ಷಣ ಮತ್ತು ಸಮಾಜ ಸೇವಾ ಕ್ಷೇತ್ರದಲ್ಲಿ ಇವರು ಸಲ್ಲಿಸುತ್ತಿರುವ ಅನುಪಮ ಸೇವೆಗೆ ಈ ಪ್ರಶಸ್ತಿಯನ್ನು ಕೊಡಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಹಿರಿಯ ನಾಗರೀಕರ ಮತ್ತು ಅಂಗವಿಕಲರ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರïರವರಿಂದ ಪ್ರಶಸ್ತಿ ಸ್ವೀಕರಿಸಿದರು. ವೇದಿಕೆಯಲ್ಲಿ ಕನ್ನಡ ಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ, ಬಾಗಲಕೋಟೆ ಜಿಲ್ಲಾಧಿಕಾರಿ ಕೆ.ಎಂ ಜಾನಕಿ, ವಿಟಿಯು ಕುಲಪತಿ ಡಾ|| ವಿದ್ಯಾಶಂಕರ ಮತ್ತು ಕ್ರಿಕೆಟ್ ಆಟಗಾರ್ತಿ ರಾಜೇಶ್ವರಿ ಗಾಯಕïವಾಡ್ ಇದ್ದರು.ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅನುವಾದಕಿ ದೀಪಾ ಸೇರಿದಂತೆ ಸಮಾಜದ ವಿವಿಧ ಸ್ತರಗಳಲ್ಲಿ ಸಾಧನೆ ಮಾಡಿದ 35 ಸಾಧಕಿಯರನ್ನು ಈ ಸಮಾರಂಭದಲ್ಲಿ ಸನ್ಮಾನಿಸಲಾಯಿತು.
No comments:
Post a Comment