ಸಿದ್ಧಗಂಗಾ ವಿದ್ಯಾ ಸಂಸ್ಥೆಯಲ್ಲಿ ಪ್ರಥಮ ಪಿಯುಸಿ ಓದುತ್ತಿರುವ ವಿದ್ಯಾರ್ಥಿ ಗಿರೀಶ್ ಆರ್ ನೇಸರ್ಗಿ 2025-2026 ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಫುಟ್ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಅಪ್ರತಿಮ ಸಾಧನೆ ಮೆರೆದಿದ್ದಾನೆ.ಈ ವಿದ್ಯಾರ್ಥಿ ಜಿಲ್ಲಾ ಮಟ್ಟದಲ್ಲಿ ಆಡಿ ಸಿದ್ಧಗಂಗಾ ಕಾಲೇಜಿನ ವತಿಯಿಂದ ಜಿಲ್ಲಾ ತಂಡದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಲ್ಲದೆ ರಾಜ್ಯಮಟ್ಟದಿಂದ ರಾಷ್ಟ್ರಮಟ್ಟಕ್ಕೂ ಆಯ್ಕೆಗೊಂಡು
6/10/2025 ರಿಂದ 10/10/2025ರ ವರೆಗೆ ಜಮ್ಮು ಕಾಶ್ಮೀರದಲ್ಲಿ ನಡೆದ 19 ವರ್ಷದ ಕೆಳಗಿನವರಿಗೆ ಆಡಿಸುವ 69ನೇ ರಾಷ್ಟ್ರ ಮಟ್ಟದ ಶಾಲಾ ಪಂದ್ಯಗಳಲ್ಲಿ ಫುಟ್ಬಾಲ್ ಆಟಗಾರನಾಗಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ನಮ್ಮ ರಾಜ್ಯಕ್ಕೆ ̧ ಜಿಲ್ಲೆಗೆ ಹಾಗೂ ಕಾಲೇಜಿಗೆ ಕೀರ್ತಿ
ತರುವುದರ ಮೂಲಕ ದಾವಣಗೆರೆಯ ಕ್ರೀಡಾ ಇತಿಹಾಸದ ಸುವರ್ಣ ಪುಟಗಳಲ್ಲಿ ದಾಖಲಿಸಲ್ಪಟ್ಟು ಸಿದ್ಧಗಂಗಾ ಸಂಸ್ಥೆಗೆ, ಪೋಷಕರಿಗೆ ಹೆಮ್ಮೆಯ ತುರಾಯಿ ಮುಡಿಸಿದ್ದಾರೆ .

ವಿದ್ಯಾರ್ಥಿಯ ಈ ಸಾಧನೆಗೆ ಸಂಸ್ಥೆಯ ಮುಖ್ಯಸ್ಥರಾದ ಡಾಕ್ಟರ್ ಜಸ್ಟಿನ್ ಡಿಸೋಜಾ, ನಿರ್ದೇಶಕರಾದ ಡಾಕ್ಟರ್ ಜಯಂತ್ ಡಿ ಎಸ್ ಹಾಗೂ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಶಾಂತ್ ಡಿ ಎಸ್ ಕಾರ್ಯದರ್ಶಿ ಹೇಮಂತ್ ಡಿ ಎಸ್ ಅಭಿನಂದನೆ ಸಲ್ಲಿಸಿದ್ದಾರೆ. ಕಾಲೇಜಿನ ಪ್ರಾಚಾರ್ಯರಾದ
ಶ್ರೀಮತಿ ವಾಣಿಶ್ರೀ ಹಾಗೂ ಉಪನ್ಯಾಸಕ ವರ್ಗ, ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿ ವಿದ್ಯಾರ್ಥಿಯ ಈ ಸಾಧನೆಯನ್ನು ಅಭಿನಂದಿಸಿರುತ್ತಾರೆ