ಪ್ರಥಮ ಹಾಗೂ ದ್ವಿತೀಯ ಪಿಯುಸಿ ಹಂತದ 11 ವಿವಿಧ ಸ್ಪರ್ಧೆಗಳಿಗೆ ದಾವಣಗೆರೆ ಜಿಲ್ಲೆಯ 41 ಪದವಿ ಪೂರ್ವ ಕಾಲೇಜುಗಳಿಂದ ಸುಮಾರು 580 ಸ್ಪರ್ಧಾರ್ಥಿಗಳು ಭಾಗವಹಿಸಿದರು. ಸಂಜೆ 4 ಗಂಟೆ ಸಮಾರೋಪ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಮಾರಂಭದಲ್ಲಿ ಉಪನಿರ್ದೇಶಕರಾದ(ಪದವಿ ಪೂರ್ವ) ಶ್ರೀ ಪಳನಿವೇಲು ಡಿ. ಇವರು ವಿದ್ಯಾರ್ಥಿಗಳನ್ನು ಕುರಿತು ಉತ್ತಮವಾಗಿ ಅಭ್ಯಾಸ ಮಾಡಲು ಹಲವು ದಾರಿಗಳಿದ್ದು, ಸರ್ಕಾರವು ವಿವಿಧ ಅವಕಾಶಗಳನ್ನು ಕಲ್ಪಿಸಿದೆ ಅದನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ವಿಜೇತ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳು ಹೇಗೆ ಸಿದ್ಧತೆ ಮಾಡಿಕೊಳ್ಳಬೇಕು ಎನ್ನುವುದರ ಕುರಿತು ಸೂಕ್ತ ಸಲಹೆ ನೀಡಿ, ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಈ ಸಂದರ್ಭದಲ್ಲಿ ಶ್ರೀ ಓಹಿಲೇಶ್ವರ, ಶ್ರೀ ಹೇಮಂತ್ ಡಿ.ಎಸ್., ಶ್ರೀಮತಿ ಗಾಯಿತ್ರಿ ಚಿಮ್ಮಡ್, ಶ್ರೀಮತಿ ವಾಣಿಶ್ರೀ, ಶ್ರೀ ಸುರೇಶ ಆರ್, ಶ್ರೀ ಶಿವಪ್ಪ ಜೆ, ಶ್ರೀ ಭೀಮ ಕುಮಾರ ಜೆ.ವಿ ಇವರುಗಳೂ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮುಂದಿನ ಹಂತಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಶುಭ ಕೋರಿದರು.
ದಾವಣಗೆರೆ ಜಿಲ್ಲೆಯ ವಿವಿಧ ಕಾಲೇಜುಗಳಿಂದ ಆಗಮಿಸಿದ ಸ್ಪರ್ಧಾರ್ಥಿಗಳಲ್ಲಿ ಶ್ರೀ ಸಿದ್ಧಗಂಗಾ ಪದವಿ ಪೂರ್ವ ಕಾಲೇಜಿನ
ವಿದ್ಯಾರ್ಥಿಗಳಾದ ದ್ವಿತೀಯ ಪಿಯುಸಿ ಹಂತದಲ್ಲಿ ಭಾವಗೀತೆ ಸ್ಪರ್ಧೆಯಲ್ಲಿ ವರುಣ ಎಂ ಹಾಗು ಜಾನಪದ ನೃತ್ಯ ಸ್ಪರ್ಧೆಯಲ್ಲಿ ಉಷಾರಾಣಿ ಎಂ, ಪ್ರಥಮ ಸ್ಥಾನ ಪಡೆದಿರುತ್ತಾರೆ. ಏಕಪಾತ್ರಾಭಿನಯ ಸ್ಪರ್ಧೆಯಲ್ಲಿ ಕವನ ಕೆ ಎನ್, ಆಂಗ್ಲ ಮಾಧ್ಯಮ ಪ್ರಬಂಧ ಸ್ಪರ್ಧೆಯಲ್ಲಿ ಸಿಂಧು ಡಿ ಜಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಆಂಗ್ಲ ಮಾಧ್ಯಮ ಚರ್ಚಾ ಸ್ಪರ್ಧೆಯಲ್ಲಿ ಅನುಷಾ ಕೆ ಎಸ್ ಹಾಗೂ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಣವ್ ದಿಗ್ಗಾವಿ ಹಾಗೂ ಅನಂತಸೇನ ಬಿ ಎಂ ತೃತೀಯ ಸ್ಥಾನ ಪಡೆದಿರುತ್ತಾರೆ. ಪ್ರಥಮ ಪಿಯುಸಿಯ ಹಂತದಲ್ಲಿ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಮಾನ್ಯಶ್ರೀ ಎಂ ನಾಡಿಗರ್, ಏಕಪಾತ್ರಾಭಿನಯ ಸ್ಪರ್ಧೆಯಲ್ಲಿ ಶಶಾಂಕ ಈರಪ್ಪ ತೆಪ್ಪದ್, ಕನ್ನಡ ಮಾಧ್ಯಮ ಚರ್ಚಾ ಸ್ಪರ್ಧೆಯಲ್ಲಿ ವೇದ ಪ್ರಕಾಶ್ ಅಜ್ಜಂನವರ್, ಆಂಗ್ಲ ಮಾಧ್ಯಮ ಚರ್ಚಾ ಸ್ಪರ್ಧೆಯಲ್ಲಿ ಹುಸ್ನ ಎನ್ ಇವರುಗಳು ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಈ ಎಲ್ಲಾ ಕಾರ್ಯಕ್ರಮಗಳ ಸಂಚಾಲಕರಾದ ಡಾ ಧನಂಜಯಪ್ಪ ಬಿ ಎನ್, ಶ್ರೀ ಸದಾಶಿವ ಹೊಳ್ಳ, ಶ್ರೀ ಸಂತೋಷ್ ಎಸ್ ಹಾಗೂ ಎಲ್ಲಾ ಉಪನ್ಯಾಸಕ ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದರು.

No comments:
Post a Comment