Wednesday, November 26, 2025

ಸಿದ್ಧಗಂಗಾ ಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆ

ದಾವಣಗೆರೆ, ನವೆಂಬರ್‌ 26



ನಗರದ ಸಿದ್ಧಗಂಗಾ ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆ ಆಚರಿಸಲಾಯಿತು. ಮುಖ್ಯ ಶಿಕ್ಷಕಿ ರೇಖಾರಾಣಿಯವರು ಸಂವಿಧಾನದ ಪೀಠಿಕೆಯನ್ನು ಮಕ್ಕಳಿಗೆ ಬೋಧಿಸಿದರು. ಶಾಲಾ-ಕಾಲೇಜಿನ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿ-ವಿದ್ಯಾರ್ಥಿನಿಯರು ತಮ್ಮ ಬಲಗೈ ಚಾಚಿ ಪೀಠಿಕೆಯನ್ನು ಪುನರುಚ್ಛರಿಸಿದರು. ಸಂವಿಧಾನದ ಮಹತ್ವ ಮತ್ತು ಕರಡು ಪ್ರತಿ ತಯಾರಿಸಿದ ಡಾ|| ಅಂಬೇಡ್ಕರ್ರವರ ತಂಡದ ಪರಿಚಯವನ್ನು ಮಾಡಿಕೊಡಲಾಯಿತು. ಡಾ|| ಬಿ.ಆರ್‌. ಅಂಬೇಡ್ಕರ್‌ ಮತ್ತು ಸಂವಿಧಾನ ಪೀಠಿಕೆ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಲಾಯಿತು.


No comments:

Post a Comment